ಬಿಜಾಪುರ: ಲೋಕಸಭೆ ಚುನಾವಣೆಗೂ (Lok Sabha Election 2024) ಮುನ್ನ ಛತ್ತೀಸ್‌ಗಢದಲ್ಲಿ ನಕ್ಸಲೀಯರ ವಿರುದ್ಧ ಭದ್ರತಾ ಪಡೆ ಸಿಬ್ಬಂದಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇಲ್ಲಿನ ಬಿಜಾಪುರದಲ್ಲಿ (Chhattisgarh) ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಆರು ನಕ್ಸಲೀಯರನ್ನು ಹತ್ಯೆಗೈದಿದ್ದಾರೆ (Six Naxals killed) ಎಂದು ತಿಳಿದು ಬಂದಿದೆ.

ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಎನ್‌ಕೌಂಟರ್ ಕಾಳಗದಲ್ಲಿ ಆರು ಮಂದಿ ನಕ್ಸಲೀಯರನ್ನು ಪೊಲೀಸರು ಹೊಡೆದುರುಳಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಸಿಬ್ಬಂದಿ ತಿಳಿಸಿದ್ದಾರೆ. ಮೃತಪಟ್ಟ ನಕ್ಸಲರ ಪೈಕಿ ಒಬ್ಬ ಮಹಿಳಾ ನಕ್ಸಲೈಟ್ ಕೂಡ ಸೇರಿದ್ದಾಳೆ. ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸಬ್ಕಾ ಗ್ರಾಮಗಳ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.